
ಬೆಂಗಳೂರು : ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೆಸಾರ್ಟ್ ಗಳು ತಲೆ ಎತ್ತುತ್ತಿದ್ದು, ಅಕ್ರಮವಾಗಿ ರೆಸಾರ್ಟ್ ಗಳನ್ನು ನಡೆಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಫಾರಿಗಳು ಸೇರಿದಂತೆ ಜನರ ಸಂಚಾರ ಹೆಚ್ಚುತ್ತಿದೆ. ನೀರು ಮತ್ತು ಮೇವಿನ ಕೊರತೆಯಿಂದ ಹುಲಿ, ಚಿರತೆಗಳ ಹಾವಳಿಯಿಂದ ಕಾಡು ಪ್ರಾಣಿಗಳು ಜನವಸತಿ ಪ್ರದೇಶಕ್ಕೆ ಬರುತ್ತಿವೆ. ಈ ಬಗ್ಗೆ ಸಂಬಂಧಪಟ್ಟ ಸಚಿವರು ಈಗಾಗಲೇ ಸಭೆ ನಡೆಸಿದ್ದಾರೆ.
ಪ್ರವಾಸಿಗರಿಗಾಗಿ ಕೈಗೊಳ್ಳುವ ಸಫಾರಿಗಳ ಸಂಖ್ಯೆಯನ್ನೂ ಕಡಿಮೆ ಮಾಡಲು ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.



The post ಅಕ್ರಮವಾಗಿ ರೆಸಾರ್ಟ್ ನಡೆಸುವವರ ವಿರುದ್ಧ ಕಾನೂನು ಕ್ರಮ : ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ first appeared on karavalinews.com.


