ಐತಿಹಾಸಿಕ ಕ್ರಿಕೆಟ್ ವಿಶ್ವಕಪ್ ಗೆದ್ದ ಮಹಿಳಾ ತಂಡಕ್ಕೆ 51 ಕೋಟಿ ರೂ. ನಗದು ಬಹುಮಾನ ಘೋಷಿಸಿದ ಬಿಸಿಸಿಐ

abhi
2 Min Read

 ಮುಂಬೈ: ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 52 ರನ್ ಗಳ ಅಂತರದಲ್ಲಿ ಮಣಿಸಿ ಚೊಚ್ಚಲ ವಿಶ್ವಕಪ್ ಜಯಿಸಿದ ಭಾರತ ತಂಡದ ಸಾಧನೆಗೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.

ಭಾರತ ನೀಡಿದ್ದ 299 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ದಕ್ಷಿಣ ಆಫ್ರಿಕಾ ತಂಡ 45.3 ಓವರ್ ನಲ್ಲಿ 246 ರನ್ ಗಳಿಗೇ ತನ್ನೆಲ್ಲಾ ವಿಕೆಟ್ ಕಳೆದು ಕೊಂಡು 52 ರನ್ ಗಳ ಅಂತರದಲ್ಲಿ ಭಾರತದ ಎದುರು ಮಂಡಿಯೂರಿತು.ಆ ಮೂಲಕ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿ ಆರಂಭವಾದ ಬರೊಬ್ಬರಿ 52 ವರ್ಷಗಳ ಬಳಿಕ ಭಾರತ ತಂಡ ಮೊಟ್ಟಮೊದಲ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿದಿದೆ.

ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಅಂತಿಮವಾಗಿ 2005 ಮತ್ತು 2017ರ ವಿಶ್ವಕಪ್ ಫೈನಲ್‌ ಪಂದ್ಯಗಳ ಸೋಲಿನ ನೋವನ್ನು ಮರೆತು, ದಕ್ಷಿಣ ಆಫ್ರಿಕಾ ವಿರುದ್ಧ ಜಯ ಸಾಧಿಸುವ ಮೂಲಕ ಏಕದಿನ ಮಾದರಿಗಳಲ್ಲಿ ತನ್ನ ಚೊಚ್ಚಲ ವಿಶ್ವ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಈ ಐತಿಹಾಸಿಕ ಸಾಧನೆಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವಿಜೇತ ತಂಡಕ್ಕೆ 51 ಕೋಟಿ ರೂ. ನಗದು ಬಹುಮಾನ ಘೋಷಿಸಿದೆ.

ಬಿಸಿಸಿಐ ಕಾರ್ಯದರ್ಶಿ ದೇವಾಜಿತ್ ಸೈಕಿಯಾ ಅವರು ಈ ಬಹುಮಾನವನ್ನು ಪ್ರಕಟಿಸಿದ್ದು, ಆಟಗಾರ್ತಿಯರು, ಕೋಚ್‌ಗಳು ಮತ್ತು ಸಹಾಯಕ ಸಿಬ್ಬಂದಿ ಎಲ್ಲರಿಗೂ ಈ ಮೊತ್ತವನ್ನು ಹಂಚಲಾಗುವುದು ಎಂದು ತಿಳಿಸಿದ್ದಾರೆ. ಟ್ರೋಫಿ ಗೆದ್ದ ಭಾರತ ತಂಡಕ್ಕೆ ಐಸಿಸಿ ಕಡೆಯಿಂದಲೂ 39 ಕೋಟಿ ರೂ. ನಗದು ಬಹುಮಾನ ಸಿಕ್ಕಿದ್ದು, ಒಟ್ಟು ನಗದು ಬಹುಮಾ ಮೊತ್ತ 90 ಕೋಟಿ ರೂ.ಗೆ ತಲುಪಿದೆ.

ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ತಂಡವನ್ನು 52 ರನ್ ಗಳ ಅಂತರದಲ್ಲಿ ಮಣಿಸಿ ಭರ್ಜರಿ ಜಯ ದಾಖಲಿಸಿತು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

The post ಐತಿಹಾಸಿಕ ಕ್ರಿಕೆಟ್ ವಿಶ್ವಕಪ್ ಗೆದ್ದ ಮಹಿಳಾ ತಂಡಕ್ಕೆ 51 ಕೋಟಿ ರೂ. ನಗದು ಬಹುಮಾನ ಘೋಷಿಸಿದ ಬಿಸಿಸಿಐ first appeared on karavalinews.com.

Share This Article
Leave a Comment