
ಮಣಿಪಾಲ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ವತಿಯಿಂದ ರಾಮನಗರದಲ್ಲಿ ಅ.31 ಹಾಗೂ ನ.1 ರಂದು ನಡೆದ ರಾಜ್ಯಮಟ್ಟದ ವಾಲಿಬಾಲ್ ಪಂದದಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾನಗರದ ದ್ವಿತೀಯ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ನೈಜ ಆರ್ ಹೆಗ್ಡೆ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ಕುಕ್ಕೆಹಳ್ಳಿ ರಾಜೇಶ್ ಹೆಗ್ಡೆ ಹಾಗೂ ಸಂಧ್ಯಾ ಕುಮಾರಿ ಶೆಟ್ಟಿಯವರ ಸುಪುತ್ರಿ. ಸಾಧಕ ವಿದ್ಯಾರ್ಥಿನಿಯನ್ನು ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರು, ಹಾಗೂ ಬೋಧಕ ಬೋಧಕೇತರ ವರ್ಗ ಅಭಿನಂದಿಸಿರುತ್ತಾರೆ.


 
 
 
 
 
 
 
 
 
 
 
 
 
 
 
 
 
 
 
 
 
 
 
 
The post ರಾಜ್ಯಮಟ್ಟದ ವಾಲಿಬಾಲ್: ಜ್ಞಾನಸುಧಾದ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆ ಆಯ್ಕೆ first appeared on karavalinews.com.


 
 
 
 
 
 