
ಮಣಿಪಾಲ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದಿಂದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ನಲ್ಲಿ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾ ನಗರದ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಿರಾಗ್ ಸಿ ಪೂಜಾರಿ ಇವರು 100ಮೀ. ಹಾಗೂ 200 ಮೀ. ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ.
ಇವರು ಹೆಬ್ರಿ ಸಂತೆಕಟ್ಟೆಯ ಚಂದ್ರ ಪೂಜಾರಿ ಹಾಗೂ ಜಯಲಕ್ಷ್ಮಿ ದಂಪತಿಗಳ ಸುಪುತ್ರ.
ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗ ಬಸವನಗುಡಿ ಬೆಂಗಳೂರಿನಲ್ಲಿಆಯೋಜಿಸಿದ ರಾಜ್ಯಮಟ್ಟದ ವಾಟರ್ ಪೋಲೊ ಸ್ಪರ್ಧೆಯಲ್ಲಿ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾ ನಗರದ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿ ಪಾರ್ಥ ಜೆ ಗೌಡ ರಾಜ್ಯಮಟ್ಟದ ವಾಟರ್ ಪೋಲೊ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ.
ಇವರು ಹಾಸನ ಜಿಲ್ಲೆಯ ಅರಸೀಕೆರೆಯ ದಾಸನಹಳ್ಳಿಯ ಡಿ.ಜೆ. ಜಗದೀಶ್ ಹಾಗೂ ಸುಜಾತ ಎಸ್.ಎಸ್. ದಂಪತಿಗಳ ಸುಪುತ್ರ.
ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರು, ಹಾಗೂ ಬೋಧಕ ಬೋಧಕೇತರ ವರ್ಗ ಅಭಿನಂದಿಸಿರುತ್ತಾರೆ.



The post ಮಣಿಪಾಲ ಜ್ಞಾನಸುಧಾ: ಅಥ್ಲೆಟಿಕ್ಸ್ ನಲ್ಲಿ ಚಿರಾಗ್ ರಾಜ್ಯಮಟ್ಟಕ್ಕೆ ಆಯ್ಕೆ – ವಾಟರ್ ಪೋಲೊ ಸ್ಪರ್ಧೆಯಲ್ಲಿ ಪಾರ್ಥ ರಾಷ್ಟ್ರಮಟ್ಟಕ್ಕೆ ಆಯ್ಕೆ first appeared on karavalinews.com.


