ಬೆಳ್ಮಣ್: ಪಾದಾಚಾರಿ ಮತ್ತು ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು: ಪಾದಾಚಾರಿ ಸಾವು, ಕಾರಿನಲ್ಲಿದ್ದ ಐವರಿಗೆ ಗಾಯ

abhi
2 Min Read

ಕಾರ್ಕಳ: ತಾಲೂಕಿನ ಬೆಳ್ಮಣ್ ಗ್ರಾಮದ ಅರಣ್ಯ ಇಲಾಖೆಯ ಕಛೇರಿ ಬಳಿ ಹಾದು ಹೋಗಿರುವ ಕಾರ್ಕಳ-ಪಡುಬಿದ್ರೆ ರಾಜ್ಯ ಹೆದ್ದಾರಿಯಲ್ಲಿ ಅತೀವೇಗವಾಗಿ ಹೋಗುತ್ತಿದ್ದ ಕಾರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಡಿಕ್ಕಿಯಾಗಿ, ಬಳಿಕ ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದ್ದು, ಕಾರು ಡಿಕ್ಕಿಯಾದ ಪಾದಾಚಾರಿ ವ್ಯಕ್ತಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಚಾಲಕ ಸಹಿತ ಐದು ಮಂದಿ ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಕ್ಷಣ್ ಎಂಬಾತ ನ.5 ಬುಧವಾರ ಸಂಜೆ ಕಾರಿನಲ್ಲಿ ಸಮರ್ಥ, ಸ್ವಯಂ ಶೆಟ್ಟಿ, ಅಮನ್ ವಿ ಶೆಟ್ಟಿ ಮತ್ತು ರಿಯಾನ್ ಎಂಬವರೊAದಿಗೆ ಕಾರ್ಕಳ ಕಡೆಯಿಂದ ಪಡುಬಿದ್ರೆ ಕಡೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಕಾರು ಚಾಲಕನ ಅತೀವೇಗ ಹಾಗೂ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಪಾದಾಚಾರಿ ಸುರೇಶ್ ಅವರಿಗೆ ಕಾರು ವೇಗವಾಗಿ ಬಂದ ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ದಾರಿಮಧ್ಯೆ ಅವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಐವರಿಗೂ ಗಾಗಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

The post ಬೆಳ್ಮಣ್: ಪಾದಾಚಾರಿ ಮತ್ತು ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು: ಪಾದಾಚಾರಿ ಸಾವು, ಕಾರಿನಲ್ಲಿದ್ದ ಐವರಿಗೆ ಗಾಯ first appeared on karavalinews.com.

Share This Article
Leave a Comment