ಕಾರ್ಕಳ ಜ್ಞಾನಸುಧಾ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ: ಮೊಬೈಲ್ ಗೀಳು ಬದುಕು ಹಾಳು : ಸುಕೇಶ್ ಶೆಟ್ಟಿ ಹೊಸಮಠ

abhi
2 Min Read

 

 

 

 

ಕಾರ್ಕಳ,ನ. 8: ಕ್ರೀಡೆಯು ಬದುಕಿನಲ್ಲಿ ಮಹತ್ತರವಾದ ಪಾತ್ರವಹಿಸುತ್ತದೆ. ಆದರೆ ಇಂದಿನ ಯುವಜನತೆ ಮೊಬೈಲ್ ಗೀಳಿಗೆ ಒಳಗಾಗಿ ಬದುಕನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂಬ ಆತಂಕ ಸಮಾಜಕ್ಕಾಗಿದೆ. ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ದೇಶದ ಉನ್ನತಿಗೆ
ಕೈಜೋಡಿಸುವವರಾಗಿ, ಸಮಾಜಮುಖಿ ವ್ಯಕ್ತಿತ್ವವಾಗಿ ರೂಪುಗೊಂಡಾಗ ಜೀವನ ಸಾರ್ಥಕವಾಗುತ್ತದೆ ಎಂದು ಶ್ರೀ ಮೂಕಾಂಬಿಕಾ ದೇವಳ ಸ್ವತಂತ್ರ ಪದವಿ ಪೂರ್ವ ಕಾಲೇಜು ಇಲ್ಲಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ಸುಕೇಶ್ಶೆ ಟ್ಟಿ ಹೊಸಮಠ ನುಡಿದರು.
ಅವರು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲ ದಿನೇಶ್ ಎಂ ಕೊಡವೂರ್ ವಹಿಸಿದ್ದರು.
ಅರ್ನ್ ಲರ್ನ್ ಬಿಸ್‌ನೆಸ್ ಪೈರ್ ಉದ್ಘಾಟನೆ : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ಸಂಸ್ಥೆಯ ವಾಣಿಜ್ಯ ವಿಭಾಗದ ವತಿಯಿಂದ ವಿದ್ಯಾರ್ಥಿಗಳೇ ಮುನ್ನಡೆಸುವ ಬಿಸ್‌ನೆಸ್ ಪೈರನ್ನು ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಳ ಸ್ವತಂತ್ರö್ಯ ಪದವಿ ಪೂರ್ವ ಕಾಲೇಜು ಇಲ್ಲಿನ ದೈಹಿಕ ಶಿಕ್ಷಣ ನಿರ್ದೇಶಕ ಸುಕೇಶ್ ಶೆಟ್ಟಿ ಹೊಸಮಠ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಅಜೆಕಾರ್ ಪದ್ಮಗೋಪಾಲ್ಎ ಜ್ಯುಕೇಶನ್ ಟ್ರಸ್ಟಿನ ಟ್ರಸ್ಟಿ ಅನಿಲ್ ಕುಮಾರ್ ಜೈನ್, ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲ ದಿನೇಶ್ ಎಂ ಕೊಡವೂರ್, ಪಿ.ಆರ್.ಒ ಜ್ಯೋತಿ ಪದ್ಮನಾಭ ಭಂಡಿ, ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗಣೇಶ್ ಶೆಟ್ಟಿ, ಉಪಪ್ರಾಂಶುಪಾಲರುಗಳಾದ ಸಾಹಿತ್ಯ, ಉಷಾ ರಾವ್ ಯು ಹಾಗೂ ವಾಣಿ ಕೆ., ಡೀನ್ಅ ಕಾಡೆಮಿಕ್ಸ್ ಡಾ. ಮಿಥುನ್ ಯು, ಡೀನ್ ಸ್ಟೂಡೆಂಟ್ ಅಫೈರ್ ಶಕುಂತಳಾ ಸುವರ್ಣ, ವ್ಯವಹಾರ ಅಧ್ಯಯನದ ಉಪನ್ಯಾಸಕ ಶೈಲೇಶ್ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕಿ ಸೌಜನ್ಯ ಹೆಗ್ಡೆ ಹಾಗೂ ಸಂಸ್ಥೆಯ ಹಿತೈಷಿಗಳಾದ ತ್ರಿವಿಕ್ರಮ ಕಿಣಿ ಮತ್ತು  ದೇವೇಂದ್ರ ನಾಯಕ್ ಉಪಸ್ಥಿತರಿದ್ದರು.
ಆಂಗ್ಲಭಾಷಾ ವಿಭಾಗದ ಮುಖ್ಯಸ್ಥೆ ಸಂಗೀತಾ ಕುಲಾಲ್ ಕಾರ್ಯಕ್ರಮ ನಿರೂಪಿಸಿ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಸೌಜನ್ಯ ಹೆಗ್ಡೆ ಸ್ವಾಗತಿಸಿ, ಪಥಸಂಚಲನದ ಉದ್ಘೋಷಣೆಯನ್ನು ರಸಾಯನ ಶಾಸ್ತç ವಿಭಾಗದ ಮುಖ್ಯಸ್ಥ ಡಾ. ಪ್ರಜ್ವಲ್ ಕುಲಾಲ್ ನಡೆಸಿಕೊಟ್ಟರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

The post ಕಾರ್ಕಳ ಜ್ಞಾನಸುಧಾ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ: ಮೊಬೈಲ್ ಗೀಳು ಬದುಕು ಹಾಳು : ಸುಕೇಶ್ ಶೆಟ್ಟಿ ಹೊಸಮಠ first appeared on karavalinews.com.

Share This Article
Leave a Comment