ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ನ.30 ಕೊನೆಯ ದಿನ 

abhi
4 Min Read

 

 

 

 

ಕಾರ್ಕಳ,ನ. 8: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ನವೆಂಬರ್ 30 ಕೊನೆಯ ದಿನವಾಗಿದೆ ಎಂದು ಕೆಎಂಸಿ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.
ಇದು ಆಸ್ಪತ್ರೆಯ ಎಲ್ಲಾ ಆರೋಗ್ಯ ಸೇವೆಗಳ ಮೇಲೆ ರಿಯಾಯಿತಿ ನೀಡುತ್ತದೆ. ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು. ಕಾರ್ಡ್ ಖರೀದಿಸಲು ಹೂಡಿಕೆ ಮಾಡಿದ ಹಣವನ್ನು ಕೇವಲ ಒಂದು ಅಥವಾ ಎರಡು ಸಲ ಕಾರ್ಡ್ ಬಳಕೆಗಳಲ್ಲಿ ರಿಯಾಯಿತಿಯ ರೂಪದಲ್ಲಿ ಹಿಂಪಡೆಯಬಹುದು. “ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ” ಎಂಬುದು ಮಣಿಪಾಲ್ ಆರೋಗ್ಯಕಾರ್ಡ್ ನ ದ್ಯೇಯ ವಾಕ್ಯ.

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರ ಮಾರ್ಗದರ್ಶನದಲ್ಲಿ 2000 ರಲ್ಲಿ ಪ್ರಾರಂಭಿಸಲಾದ ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯು ಈಗ ರಜತ ಮಹೋತ್ಸವದ ಮೈಲಿಗಲ್ಲನ್ನು ತಲುಪಿದೆ. 25 ವರ್ಷಗಳಲ್ಲಿ, ಇದು ಕೋಟ್ಯಂತರ ಫಲಾನುಭವಿಗಳ ಜೀವನವನ್ನು ಮುಟ್ಟಿದೆ. 2000ನೇ ಇಸವಿಯಲ್ಲಿ, 3,200 ಕುಟುಂಬಗಳು ಮಣಿಪಾಲ ಆರೋಗ್ಯಕಾರ್ಡ್ ಯೋಜನೆಯಡಿ ನೋಂದಣಿ ಮಾಡಿದ್ದರು . ಕಳೆದ ಹಣಕಾಸು ವರ್ಷದಲ್ಲಿ ನಾವು 1.25 ಲಕ್ಷ ಕುಟುಂಬಗಳು ಈ ಯೋಜನೆಗಳ ಅಡಿಯಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ ಮತ್ತು ನಾವು ಈ ಯೋಜನೆಯಡಿಯಲ್ಲಿ 6.72 ಲಕ್ಷ ಸದಸ್ಯರನ್ನು ಹೊಂದಿದ್ದೇವೆ. ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಪ್ರಯೋಜನವನ್ನು ನೀಡುತ್ತಿದೆ.

ಮಣಿಪಾಲ್ ಆರೋಗ್ಯ ಕಾರ್ಡ್‌ದಾರರು ತಜ್ಞ ಮತ್ತು ಸೂಪರ್ ಸ್ಪೆಷಲಿಸ್ಟ್ ವೈದ್ಯರೊಂದಿಗೆ ಸಮಾಲೋಚನೆ ಶುಲ್ಕದಲ್ಲಿ 50% ರಿಯಾಯಿತಿ, ರೋಗನಿರ್ಣಯ ಮತ್ತು ಪ್ರಯೋಗಾಲಯ ಪರೀಕ್ಷೆ ಸೇವೆಯಲ್ಲಿ 25% ರಿಯಾಯಿತಿ, ರೇಡಿಯಾಲಜಿ , ಹೊರರೋಗಿ ಕಾರ್ಯವಿಧಾನಗಳು ಮತ್ತು ಮಧುಮೇಹ ಪಾದದ ಆರೈಕೆಯಲ್ಲಿ 20% ರಿಯಾಯಿತಿ, ಡಯಾಲಿಸಿಸ್‌ನಲ್ಲಿ ₹ 100 ರಿಯಾಯಿತಿ, ಆಸ್ಪತ್ರೆಯ ಔಷಧಿಗಳ ಮೇಲೆ 10% ವರೆಗೆ ರಿಯಾಯಿತಿ ಮತ್ತು ಜನರಲ್ ವಾರ್ಡ್‌ನಲ್ಲಿ ಒಳರೋಗಿಗಳ ಬಿಲ್‌ಗಳಲ್ಲಿ (ಕನ್ಸುಮಬೆಲ್ಸ್ ಮತ್ತು ಪ್ಯಾಕೇಜ್‌ಗಳನ್ನು ಹೊರತುಪಡಿಸಿ) 25% ರಿಯಾಯಿತಿ ಸೌಲಭ್ಯವಿದೆ.

ಮಣಿಪಾಲ್ ಆರೋಗ್ಯ ಕಾರ್ಡ್ 2024ರ ಯೋಜನೆಯು “ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ₹ 350 / -, ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ₹ 700/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ₹ 900/-. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ₹ 600/-, ಕುಟುಂಬಕ್ಕೆ ₹ 950/- ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ₹ 1100/- ಆಗಿರುತ್ತದೆ.

ಕಾರ್ಡ್‌ದಾರರು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ; ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆ; ಕಾರ್ಕಳದ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆ; ಮಂಗಳೂರು ಮತ್ತು ಅತ್ತಾವರದ ಕೆಎಂಸಿ ಆಸ್ಪತ್ರೆಗಳು; ಕಟೀಲಿನ ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ; ಗೋವಾದ ಮಣಿಪಾಲ ಆಸ್ಪತ್ರೆ ಮತ್ತು ಮಣಿಪಾಲ ಮತ್ತು ಮಂಗಳೂರಿನ ದಂತ ಮತ್ತು ಆಯುರ್ವೇದ ಆಸ್ಪತ್ರೆಗಳಲ್ಲಿ ಪ್ರಯೋಜನಗಳನ್ನು ಪಡೆಯಬಹುದು. ಮಣಿಪಾಲ ಮತ್ತು ಮಂಗಳೂರಿನಲ್ಲಿ ಇತರ ಆಸ್ಪತ್ರೆಗಳಲ್ಲಿನ ರಿಯಾಯಿತಿಗಳು ಮತ್ತು ಹೆಚ್ಚಿನ ಮಾಹಿತಿಗಾಗಿ, www.manipalhealthcard.com ಗೆ ಭೇಟಿ ನೀಡಿ ಅಥವಾ 9980854700 / 08202923748 ಅನ್ನು ಸಂಪರ್ಕಿಸಿ. ಎಲ್ಲಾ ನಮ್ಮ ಅಧಿಕೃತ ಪ್ರತಿನಿಧಿಗಳ ಮೂಲಕ ನೋಂದಣಿ ಮಾಡಬಹುದು.

ಪತ್ರಿಕಾಗೋಷ್ಟಿಯಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವ್ಯವಸ್ಥಾಪಕರಾದ ಶ್ರೀ ಮೋಹನ್ ಶೆಟ್ಟಿ ಹಾಗೂ ಮಾರುಕಟ್ಟೆ ವಿಭಾಗದ ಸಹಾಯಕ ವ್ಯವಸ್ಥಾಪಕರದ ಆಶ್ಲೋನ್, ಪ್ರತಿನಿಧಿಯಾದ ಶ್ರೀ ಸಂದೀಪ್ ಹಾಗೂ ನಾರಾಯಣ್ ನಾಯಕ್ ಇವರೆಲ್ಲರೂ ಉಪಸ್ಥಿತರಿದ್ದರು.

2025ರ ನೋಂದಾವಣಿಗಾಗಿ ಅರ್ಜಿಗಳು ಕೆಳಕಂಡ ಅಧಿಕೃತ ಪ್ರತಿನಿಧಿಗಳ ಬಳಿ ಲಭ್ಯ:

ನಾರಾಯಣ ನಾಯಕ್ – 9964684643

ಸೈಂಟ್ ಮಿಲಾಗ್ರೆಸ್ ಕ್ರೆಡಿಟ್ ಸೌಹಾರ್ದ ಸಹಕಾರಿ ಲಿಮಿಟೆಡ್ ಕಾರ್ಕಳ ಮತ್ತು ಅದರ ಎಲ್ಲಾ ಶಾಖೆಗಳು – 8884414389

ಜನಹಿತ ಸೌಹಾರ್ದ ಸಹಕಾರಿ ಸಂಘ, ಕಾರ್ಕಳ – 988041149

ಹರೀಶ್ ಬಿ ಆಚಾರ್ಯ – 9945857561

ಪ್ರಜ್ವಲ್ ಕುಲಾಲ್ –8970801349

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

The post ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ನ.30 ಕೊನೆಯ ದಿನ  first appeared on karavalinews.com.

Share This Article
Leave a Comment